ಬೆಂಗಳೂರು: ಅಥಣಿಯ ಎಸ್.ಎಚ್.ಎಂ.ಇ ಟ್ರಸ್ಟ್ ಸಿದ್ಧಾಂತ ಆರ್ಯುವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಸಂಸ್ಥೆಯಲ್ಲಿ 2025ನೇ ಸಾಲಿಗೆ ಪ್ರವೇಶ ಪಡೆದಿರುವ 63 ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಹೊಸದಾಗಿ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
ನ.16ರಂದು ಬೆಳಿಗ್ಗೆ 11ಗಂಟೆಯೊಳಗೆ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಸದ್ಯ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಡೆಯುತ್ತಿದ್ದು, ಅದರಲ್ಲೇ ಅವರು ಕೂಡ ಆಪ್ಷನ್ಸ್ ದಾಖಲಿಸುವುದರ ಮೂಲಕ ಭಾಗವಹಿಸಬಹುದಾಗಿದೆ. ಈ ಸಂಬಂಧ ಎಲ್ಲ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆಯೂ ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

