ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢ ಶಾಲೆಗಳಲ್ಲಿ ಬುಧವಾರ (ನವೆಂಬರ್ 26) ಸಂವಿಧಾನ ದಿನ ಆಚರಿಸುವಂತೆ ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಸಂವಿಧಾನ ದಿನಾಚರಣೆಯ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಭಾರತದ ಸಂವಿಧಾನ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಬೇಕು, ಶಾಲೆಗಳಲ್ಲಿ ಸ್ಥಳೀಯ ಅಗತ್ಯಗಳಿಗೆ ಅನುಸಾರವಾಗಿ ಸಂವಿಧಾನದ ಮೌಲ್ಯಗಳು ಮತ್ತು ಮೂಲ ಆಶಯಗಳ ಬಗ್ಗೆ ಚರ್ಚೆ, ರಸಪ್ರಶ್ನೆ ಕಾರ್ಯಕ್ರಮಗಳು, ವೆಬಿನಾರ್ ಗಳನ್ನು ಆಯೋಜಿಸಬೇಕು, ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ, ಜಾಥಾ ಆಯೋಜಿಸಬೇಕು ಎಂದು ಸೂಚಿಸಿದ್ದಾರೆ.
