News

ಅಡ್ವೊಕೇಟ್ ಸ್ಟಿಕ್ಕರ್ ದುರ್ಬಳಕೆ: ಕ್ರಮ ಜರುಗಿಸಲು ಪೊಲೀಸರಿಗೆ ಹೈಕೋರ್ಟ್ ಆದೇಶ

Share It

ಖಾಸಗಿ ವಾಹನಗಳ ಮೇಲೆ ‘ಅಡ್ವೊಕೇಟ್’ ಸ್ಟಿಕ್ಕರ್‌ಗಳನ್ನು ಹಾಕಿಕೊಂಡು ಅವುಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳವಂತೆ ಎಂದು ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಕೆಲ ಲಾಯರ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ಅಡ್ವೊಕೇಟ್ ಸ್ಟಿಕ್ಕರ್ ಹಾಕಿಕೊಂಡು ಅವುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಸ್ಟಿಕ್ಕರ್ ದುರ್ಬಳಕೆ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರು ವಾದಿಸಿ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದಾಗ ಪೊಲೀಸರ ಕ್ರಮದಿಂದ ತಪ್ಪಿಸಿಕೊಳ್ಳಲು ಹಾಗು ಅವರನ್ನು ಬೆದರಿಸಲು ಅಡ್ವೊಕೇಟ್ ಸ್ಟಿಕ್ಕರ್ ಗಳನ್ನು ಖಾಸಗಿ ವಾಹನಗಳ ಮೇಲೆ ಅಳವಡಿಸಿಕೊಂಡು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಲಾಯರ್ ಗಳು ಹಾಗು ಕೆಲ ಖಾಸಗಿ ವ್ಯಕ್ತಿಗಳು ತಮ್ಮ ಖಾಸಗಿ ವಾಹನಗಳ ಮೇಲೆ ‘ಅಡ್ವೊಕೇಟ್ ಸ್ಟಿಕ್ಕರ್’ಗಳನ್ನು ಹಾಕಿಕೊಂಡು ಸಂಚಾರ ಅಪರಾಧಗಳಿಂದ ವಿನಾಯ್ತಿ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಜತೆಗೆ ತುರ್ತು ಸಂದರ್ಭಗಳಲ್ಲಿ ವೈದ್ಯರಿಗೆ ಸ್ಟಿಕ್ಕರ್ ಗಳ ಅವಶ್ಯಕತೆ ಇರುವುದಿಲ್ಲ. ಹಾಗೆಯೇ ವಕೀಲರು ನ್ಯಾಯಾಲಯದಿಂದ ಹೊರಗೆ ಬಂದ ನಂತರ ಸ್ಟಿಕರ್ ಅವಶ್ಯವಿರುವುದಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಸ್ಟಿಕ್ಕರ್‌ಗಳ ದುರ್ಬಳಕೆಯನ್ನು ನಿಯಂತ್ರಿಸುವ ಕುರಿತಂತೆ ಸುಪ್ರೀಂ ಕೋರ್ಟ್‌ ಹಲವು ಆದೇಶಗಳನ್ನು ನೀಡಿದೆ. ಪೊಲೀಸರು ಸರಿಯಾದ ಕ್ರಮ ತೆಗೆದುಕೊಳ್ಳಬೇಕು, ಪೊಲೀಸರು ಯಾವುದಕ್ಕೂ ಹೆದರುವ ಅಗತ್ಯವಿಲ್ಲ” ಎಂದು ಹೇಳಿದೆ.


Share It

You cannot copy content of this page