News

15 ವರ್ಷ ಮೀರಿದ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Share It

ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆಪ್ಟೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ 04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ್ ಪೋರ್ಟಲ್ ನಲ್ಲಿ ರದ್ದುಪಡಿಸಿದೆ. ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು.

2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರಿಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರಿಯಗೊಳಿಸಲು ಬಾಕಿ ಇದೆ ಎಂದು ಸಚಿವರು ಮಾಹಿತಿ ನೀಡಿದರು.


Share It

You cannot copy content of this page