News

ಪಕ್ಷ ಒಬ್ಬರಿಂದ ಅಧಿಕಾರಕ್ಕೆ ಬಂದಿಲ್ಲ: ಡಿಕೆಶಿಗೆ ಪಾಟೀಲ್ ಟಾಂಗ್

Share It

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಬೆಂಬಲಿಸುವ ಮೂಲಕ ಸಚಿವ ಎಂ.ಬಿ. ಪಾಟೀಲ್, ಶನಿವಾರ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳೆದಿಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಅಲ್ಲಿ ಎಲ್ಲರ ಪಾತ್ರವೂ ಇರುತ್ತೆ ಎಂದು ಮಲ್ಲಿಕಾರ್ಜನ ಖರ್ಗೆ ಕಲಬುರಗಿಯಲ್ಲಿ ಹೇಳಿದ್ದರು.

ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಖರ್ಗೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ ಅವರು, ಖರ್ಗೆ ಅವರು ಹೇಳಿದ್ದು ಸತ್ಯ. ಕಾಂಗ್ರೆಸ್ ತತ್ವ, ಸಿದ್ಧಾಂತದ ಮೇಲೆ ನಿಂತಿದೆ. ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದರು.

ಕಾಂಗ್ರೆಸ್ ರಾಜಕೀಯ ಪಕ್ಷವಾಗಿ ಹುಟ್ಟಿಕೊಂಡಿರೋದಲ್ಲ. ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಹುಟ್ಟಿಕೊಂಡ ಸಂಘಟನೆ. ಹೀಗಾಗಿ ಯಾರೋ ಸಹ ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಅಂತ ಹೇಳಬಾರದು ಎಂದರು. ನಾಯಕತ್ವ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಅದಕ್ಕೆ ಸಿಎಂ, ಡಿಸಿಎಂ ಹಾಗೂ ನಾನೂ ಸೇರಿದಂತೆ ಎಲ್ಲ ಕಾಂಗ್ರೆಸ್ಸಿಗರು ಬದ್ಧರಾಗಿರುತ್ತೇವೆ ಎಂದರು.


Share It

You cannot copy content of this page