News

ಸುಳ್ಳು ಸರ್ಟಿಫಿಕೇಟ್ ನೀಡಿ ಸರ್ಕಾರಿ ಹುದ್ದೆ ಗಿಟ್ಟಿಸಿದಕ್ಕೆ 7 ವರ್ಷ ಜೈಲು ಶಿಕ್ಷೆ

Share It

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸಶಸ್ತ್ರ ಪಡೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಹುದ್ದೆ ಗಿಟ್ಟಿಸಿದ್ದ ಆರೋಪಿಗೆ ಹಾವೇರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿದೆ.

ಹಾವೇರಿ ಜಿಲ್ಲೆಯ ಸೋಮಶೇಖರ ಭೀಮಪ್ಪ ಅವರು ಕುಂಕುಮಗಾರ (ಬಲಿಜ ಜನಾಂಗ) ಸಮುದಾಯಕ್ಕೆ ಸೇರಿದ್ದರೂ, ಸ್ಥಳೀಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರ ಸಹಕಾರದೊಂದಿದೆ ಜಾತಿ ಕಾಲಂ ನಲ್ಲಿ ಚನ್ನದಾಸರ ಸಮುದಾಯಕ್ಕೆ ಸೇರಿರುವುದಾಗಿ ನಮೂದಿಸಿ ಸುಳ್ಳು ವ್ಯಾಸಂಗ ಪ್ರಮಾಣ ಪತ್ರ ಪಡೆದಿದ್ದರು.

ಬಳಿಕ ಹಿರೇಕೆರೂರು ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದ್ದರು. ಅಲ್ಲದೇ, ದಕ್ಷಿಣ ಕನ್ನಡ ಜಿಲ್ಲೆಯ ಸಶಸ್ತ್ರ ಪೊಲೀಸ್ ಕಾನ್ಸಟೇಬರ್ ಹುದ್ದೆಗೆ ಆಯ್ಕೆಯಾಗಿದ್ದರು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ನೌಕರಿ ಗಿಟ್ಟಿಸಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯು ತನಿಖೆ ನಡೆಸಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿ ಸೋಮಶೇಖರ್ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ವಿರುದ್ಧ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು. ಆರೋಪಿಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀನಾರಾಯಣ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಅಭಿಯೋಜನೆ ಪರ ಸರೋಜಾ ಜಿ.ಕೂಡಲಗಿಮಠ ವಾದ ಮಂಡಿಸಿದ್ದರು.


Share It

You cannot copy content of this page