ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಚಕ್ರ ರಜೆ ಮಂಜೂರು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಶಿಕ್ಷಕಿಯರಿಗೆ ವೇತನದೊಂದಿಗೆ ಒಂದು ದಿನದ ಋತುಚಕ್ರ ರಜೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿದ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಶಾಲಾ ಶಿಕ್ಷಣ ಇಲಾಖೆಯ (ಬೆಂಗಳೂರು) ಆಯುಕ್ತರು, ಧಾರವಾಡ ಮತ್ತು ಕಲಬುರಗಿಯ ಹೆಚ್ಚುವರಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಸೂಚನೆಯಂತೆ ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.
