Law

SC-ST ಪ್ರಕರಣಗಳಲ್ಲಿ ಸಂತ್ರಸ್ತರ ವಾದ ಆಲಿಸದೆ ಜಾಮೀನು ನೀಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

Share It

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತ/ದೂರುದಾರರ ವಾದ ಆಲಿಸದೆ ಜಾಮೀನು ನೀಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪು ನೀಡಿದೆ.

ನ್ಯಾಯಮೂರ್ತಿ ನವೀನ್ ಚಾವ್ಲಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೈಕೋರ್ಟ್ ತನ್ನ ಆದೇಶದಲ್ಲಿ, ವಿಚಾರಣಾ ನ್ಯಾಯಾಲಯ ದೂರುದಾರರಿಗೆ ನೋಟಿಸ್ ನೀಡದೆ ಜಾಮೀನು ನೀಡಿದೆ. ಈ ಕಾರಣಕ್ಕಾಗಿಯೇ ಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಪೀಠ ತನ್ನ ತೀರ್ಪಿನಲ್ಲಿ “ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 15ಎ ನ ಸಬ್ ಸೆಕ್ಷನ್ (3) ಮತ್ತು (5) ರ ಪ್ರಕಾರ ಆರೋಪಿಗೆ ಜಾಮೀನು ನೀಡುವ ಮುನ್ನ ದೂರುದಾರರು/ಸಂತ್ರಸ್ತರಿಗೆ ನೋಟಿಸ್ ಜಾರಿ ಮಾಡಬೇಕು. ಅವರ ವಾದ ಆಲಿಸದೆ ಆದೇಶ ನೀಡಬಾರದು. ಈ ನಿಯಮ ಉಲ್ಲಂಘಿಸಿ ಜಾಮೀನು ನೀಡಿದ್ದರೆ ಅದನ್ನು ರದ್ದುಪಡಿಸಬಹುದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಸ್ತುತ ಪ್ರಕರಣದಲ್ಲಿ ಆರೋಪಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 354 ಬಿ (ಮಹಿಳೆಯನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸುವುದು), 506 (ಅಪರಾಧಿಕ ಬೆದರಿಕೆ) ಹಾಗೂ SC/ST ಕಾಯ್ದೆಯ ಸೆಕ್ಷನ್ 3(1)(w)(i) (ಸಮುದಾಯದ ಮಹಿಳೆಯನ್ನು ಲೈಂಗಿಕವಾಗಿ ಸ್ಪರ್ಶಿಸುವುದು) 3(2)(v) (ಸಮುದಾಯದ ವ್ಯಕ್ತಿಯನ್ನು ಅಗೌರವಿಸುವುದು) ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಪ್ರಕರಣದಲ್ಲಿ ಸಂತ್ರಸ್ತೆಗೆ ನೋಟಿಸ್ ಜಾರಿ ಮಾಡದೆ ಆರೋಪಿಗೆ ಜಾಮೀನು ನೀಡಲಾಗಿತ್ತು.

ವಿಚಾರಣಾ ನ್ಯಾಯಾಲಯದ ಈ ಆದೇಶ ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಗೆ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ತನಗೆ ಯಾವುದೇ ಸೂಚನೆ ನೀಡದೆ ಜಾಮೀನು ನೀಡಿ ಆದೇಶಿಸಲಾಗಿದೆ ಎಂದು ಆಕ್ಷೇಪಿಸಿದ್ದರು. ಸಂತ್ರಸ್ತೆಗೆ ನೋಟಿಸ್ ನೀಡದೇ ಇರುವುದನ್ನು ಮತ್ತು ವಿಚಾರಣೆಯ ಅವಕಾಶವನ್ನು ಕೊಡದೆ ಜಾಮೀನು ನೀಡಿರುವುದನ್ನು ಪರಿಗಣಿಸಿದ ಹೈಕೋರ್ಟ್, ಆರೋಪಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ಜಾಮೀನು ರದ್ದುಪಡಿಸಿದೆ.

ಅಲ್ಲದೇ, ಪ್ರಕರಣವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಿರುವ ಹೈಕೋರ್ಟ್, ದೂರುದಾರ/ಸಂತ್ರಸ್ತರಿಗೆ ವಿಚಾರಣೆಯ ಅವಕಾಶವನ್ನು ನೀಡಿದ ನಂತರವೇ ಆದೇಶ ಹೊರಡಿಸುವಂತೆ ನಿರ್ದೇಶಿಸಿದೆ.

(CRL.A. 526/2023)

ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 15ಎ ಹೇಳುವುದೇನು:

12. Sub-section (3) and sub-section (5) of Section 15A of the SC & ST Act read as under:

“15A. Rights of victims and witnesses.

(3) A victim or his dependent shall have the right to reasonable, accurate and timely notice of any Court proceeding including any bail proceeding and the Special Public Prosecutor or the State Government shall inform the victim about any proceedings under this Act.  

(5) A victim or his dependent shall be entitled to be heard at any proceeding under this Act in respect of bail, discharge, release, parole, conviction or sentence of an accused or any connected proceedings or arguments and file written submission on conviction, acquittal or sentencing.”


Share It

You cannot copy content of this page