ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಿಂದ (ಆರ್‌ಟಿಐ) ಕೇಂದ್ರೀಯ ತನಿಖಾ ದಳ ಸಿಬಿಐ ಸಂಪೂರ್ಣವಾಗಿ ಹೊರಗುಳಿಯುವಂತಿಲ್ಲ, ಭ್ರಷ್ಟಾಚಾರ ಮತ್ತು ಮಾನವ ಹಕ್ಕು ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿಯನ್ನು ಆರ್‌ಟಿಐ ಕಾಯ್ದೆಯಡಿ ನೀಡಲೇಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ.
ಸಿಬಿಐಯನ್ನು ಆರ್‌ಟಿಐ ಕಾಯ್ದೆಯ 2ನೇ ಅನುಸೂಚಿಯಡಿ (ಆರ್‌ಟಿಐ ಕಾಯಿದೆ ಯಿಂದ ವಿನಾಯಿತಿ ಪಡೆದ ಸಂಸ್ಥೆಗಳು) ಪಟ್ಟಿ ಮಾಡಲಾಗಿದ್ದರೂ, ಅಂತಹ ಸಂಸ್ಥೆಗಳಿಗೆ ಕಾಯ್ದೆ ಅನ್ವಯವಾಗುವುದಿಲ್ಲ ಎಂದರ್ಥವಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಆರ್‌ಟಿಐ ಕಾಯ್ದೆಯ ಸೆಕ್ಷನ್ 24 ರ ಅಡಿ ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅರ್ಜಿದಾರರಿಗೆ ನೀಡಬೇಕಾಗುತ್ತದೆ ಎಂದು ನ್ಯಾಯಾಲಯ ವಿವರಿಸಿದೆ.
“ಮಾನವ ಹಕ್ಕು ಉಲ್ಲಂಘನೆ ಮತ್ತು ಭ್ರಷ್ಟಾಚಾರದ ಬಗ್ಗೆ ಮಾಹಿತಿ ಯನ್ನು ಕೋರಿದಾಗ ಸೆಕ್ಷನ್ 24ರ ಅಡಿ ಸಿಬಿಐ ಅರ್ಜಿದಾರರಿಗೆ ಒದಗಿಸಬೇಕು,'” ಎಂದು ನ್ಯಾ. ಸುಬ್ರಮಣಿಯಂ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
