News

ಕೆ.ಎಸ್.ಆರ್.ಟಿ.ಸಿ ಅಂತರ ನಿಗಮ ವರ್ಗಾವಣೆಗೆ ಅವಕಾಶ

Share It

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ಕ.ರಾ.ರ.ಸಾ.ನಿಗಮವು ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಇಂದು ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗಲಿದ್ದು, ಜನವರಿ 31 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಸಾಮಾನ್ಯ ವರ್ಗಾವಣೆ, ಪತಿ-ಪತ್ನಿ / ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ತೀವ್ರ ತರಹದ ಅನಾರೋಗ್ಯ (ಹೆಚ್.ಐ.ವಿ, ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ಕಾರ್ಡ್, ಕಿಡ್ನಿ ವೈಫಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವರ್ಗಾವಣೆ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.


Share It

You cannot copy content of this page