News

ಫೈರಿಂಗ್: ಜನಾರ್ದನ ರೆಡ್ಡಿ ಗನ್ ಮ್ಯಾನ್ ಬಂಧನ

Share It

ಬಳ್ಳಾರಿಯ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಜನಾರ್ದನ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಶುರುವಾದ ಗಲಾಟೆ, ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಇದು ಬಳ್ಳಾರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿದ್ದು, ಜನಾರ್ದನ ರೆಡ್ಡಿ, ಶ್ರೀರಾಮುಲು ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದ್ದು ಜನಾರ್ದನ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಎಂದು ದೂರು ದಾಖಲಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇದು ಬಳ್ಳಾರಿಯಲ್ಲಿ ಬಿಗುವಿನ ವಾತಾವರಣ ನಿರ್ಮಿಸಿದೆ.

ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ: ಬ್ಯಾನರ್ ಕಟ್ಟುವ ವಿಷಯಕ್ಕೆ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡಿ ನಡುವೆ ಉಂಟಾದ ಘರ್ಷಣೆ ಓರ್ವ ಕಾಂಗ್ರೆಸ್ ಕಾರ್ಯಕರ್ತನೊಬ್ಬನ ಸಾವಿಗೆ ಕಾರಣವಾಗಿದೆ.

ಘಟನೆಯಲ್ಲಿ ‘ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಜನಾರ್ದನ ರೆಡ್ಡಿ ಅವರ ಬೆಂಬಲಿಗರ ಕಡೆಯಿಂದ ದಾಳಿ ನಡೆದಿದೆ’ ಎಂದು ಶಾಸಕ ಭರತ್ ರೆಡ್ಡಿ ಆರೋಪಿಸಿದ್ದಾರೆ. ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜನಾರ್ದನ ರೆಡ್ಡಿ ಮನೆ ಎದುರಿನ ಜಾಗದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಮೊದಲಿಗೆ ಜಗಳ ಆರಂಭವಾಗಿದೆ. ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರು ಜನಾರ್ದನ ರೆಡ್ಡಿ ಅವರ ಮನೆ ಎದುರು ರಸ್ತೆಯಲ್ಲಿ ಬ್ಯಾನರ್ ಕಟ್ಟಿಸಿದರು. ಈ ಕಾರಣಕ್ಕೆ ಎರಡು ಬಣಗಳ ನಡುವೆ ಮೊದಲಿಗೆ ಮಾತಿನ ಚಕಮಕಿ ನಡೆದು, ನಂತರ ಕಲ್ಲು ತೂರಾಟ ನಡೆದಿದೆ.

ಘರ್ಷಣೆಗೆ ಸಂಬಂಧಿಸಿ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರು ಆಧರಿಸಿ ಜನಾರ್ದನ ರೆಡ್ಡಿ ಅವರನ್ನು ಎ1 ಆರೋಪಿ ಮಾಡಲಾಗಿದೆ. ಸೋಮಶೇಖರ ರೆಡ್ಡಿ ಎ2, ಶ್ರೀರಾಮುಲು ಎ3, ಪಾಲಿಕೆ ವಿರೋಧ ಪಕ್ಷದ ನಾಯಕ ಮೋತ್ಕರ್ ಶ್ರೀನಿವಾಸ ಅವರನ್ನು ಎ4 ಮಾಡಲಾಗಿದೆ.


Share It

You cannot copy content of this page