ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ.
ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಜಗದೀಶ್ ಎಂಬುವವರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರಿಹಾರ ಪಾವತಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೂರುದಾರರು ಮತ್ತೇ ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಕಾರು ಜಪ್ತಿಗೆ ಆದೇಶ ನೀಡಿತ್ತು.
ಈ ವೇಳೆ ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡಿದ ನ್ಯಾಯಾಲಯದ ಅಧಿಕಾರಿಗಳು ಮತ್ತು ವಕೀಲರು ಭೂ ಪರಿಹಾರ ವಿತರಣೆ ಮಾಡಿ, ನಂತರ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಹಾಸನ ಜಿಲ್ಲಾ ನ್ಯಾಯಾಲಯದ ಹಿರಿಯ ನ್ಯಾಯಾಧೀಶರ ಆದೇಶದಂತೆ ಕಾರು ಜಪ್ತಿ ಮಾಡಲಾಗಿದೆ ಎಂದು ವೈಟ್ ಪೇಪರ್ ವರದಿ ಮಾಡಿದೆ.
