News

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 5 ವರ್ಷ ಜೈಲು ಶಿಕ್ಷೆ

Share It

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು ಸತ್ರ FTSC-1 ವಿಶೇಷ ಪೋಕ್ಸೋ ನ್ಯಾಯಾಲಯವು 5 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದೆ.

ಚಾಮರಾಜನಗರದ ರಾಮಸಮುದ್ರ ನಿವಾಸಿ ಶಿವಮೂರ್ತಿ @ ಕರಿಯ ಶಿಕ್ಷೆಗೊಳಗಾದ ಅಪರಾಧಿ.‌ ಸಂತ್ರಸ್ತೆಯು ಮನೆ ಮುಂದೆ ಕುಳಿತಿದ್ದ ವೇಳೆ ಆರೋಪಿ ಮಹಿಳೆಯನ್ನು ಮನೆಯೊಳಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಸಾಕ್ಷ್ಯಾಧಾರಗಳಿಂದ ಕೃತ್ಯ ಸಾಬೀತಾದ ಹಿನ್ನೆಲೆ ಅಪರಾಧಿಗೆ ನ್ಯಾ. ಎಸ್.ಜೆ.ಕೃಷ್ಣ ಅವರು 5 ವರ್ಷ ಕಠಿಣ ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ. ಜತೆಗೆ, ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ, ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.


Share It

You cannot copy content of this page