News

ವಕೀಲನಿಗೆ ಚಾಕುವಿನಿಂದ ಇರಿದ ದುಷ್ಕರ್ಮಿ

Share It

ಕ್ಷುಲ್ಲಕ ಕಾರಣಕ್ಕೆ ವಕೀಲರೊಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿದೆ.

ಹುಮ್ನಾಬಾದ್ ತಾಲೂಕಿನಲ್ಲಿ ವಕೀಲರಾಗಿರುವ ಅನಿಲ್ ಕುಮಾರ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಂಚೊಳ್ಳಿ ನಿವಾಸಿಯಾದ ಅನಿಲ್ ಕುಮಾರ್(26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಂದಿ ಸಾಕಾಣಿಕೆ ವಿಚಾರಣವಾಗಿ ಗಲಾಟೆ ನಡೆದಿದ್ದು, ಆ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಹೋಗುತ್ತಿರುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅನಿಲ್ ಕುಮಾರ್ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.


Share It

You cannot copy content of this page