Job News

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

Share It

ಬೆಂಗಳೂರು: ಶಿಶು ಅಭಿವೃದ್ಧ ಯೋಜನಾಧಿಕಾರಿಗಳ ಕಚೇರಿ, ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಗೌರವಧನ ಆಧಾರದಲ್ಲಿ ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಭೌತಿಕವಾಗಿ ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಜಿಲ್ಲೆ, 3ನೇ ಕ್ರಾಸ್, ಕಬಡ್ಡಿ ಕ್ರೀಡಾಂಗಣ ಹತ್ತಿರ, ಬಿಬಿಎಂಪಿ ಕಟ್ಟಡ, ಮೊದಲನೇ ಮಹಡಿ, ಗೋವಿಂದರಾಜನಗರ, ಬೆಂಗಳೂರು-40 ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿಗಳನ್ನು ಪಡೆದುಕೊಂಡು, ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು 30 ಮಾರ್ಚ್ 2026ರ ಸಂಜೆ 5.30 ಗಂಟೆಯೊಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080- 23204490/9901074633 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಕೇಂದ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.


Share It

You cannot copy content of this page