ಬೆಂಗಳೂರು: ಗೃಹಬಳಕೆ ಸಿಲಿಂಡರ್ ಗಳನ್ನು ವಾಣಿಜ್ಯ ಬಳಕೆಗೆ ಉದ್ದೇಶಕ್ಕೆ ಬಳಸುತ್ತಿದ್ದ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳ ಮೇಲೆ ಕಾರ್ಯಾಚರಣೆ ನಡೆಸಿರುವ ಆಹಾರ ಇಲಾಖೆಯ ಅಧಿಕಾರಿಗಳು ಒಟ್ಟು 316 ಸಿಲಿಂಡರ್ ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಗೃಹ ಬಳಕೆ ಸಿಲಿಂಡರ್ ಗಳನ್ನ ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದ ಬೆಂಗಳೂರಿನ ಪೀಣ್ಯದಲ್ಲಿ 45 ಸಿಲಿಂಡರ್ ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದೇ ಚಿಕ್ಕಜಾಲದಲ್ಲಿ- 209, ಶಿವಮೊಗ್ಗ- 3, ಯಾದಗಿರಿ-46, ದಾವಣಗರೆಯಲ್ಲಿ- 13 ಸಿಲಿಂಡರ್ ಗಳನ್ನ ಜಪ್ತಿ ಮಾಡಿಕೊಂಡು ಅವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ರ ಕಾಯ್ದೆ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ. ಕೆಜಿಎಫ್ ನಲ್ಲಿ ಅಕ್ರಮ ರೀಪಿಲ್ಲಿಂಗ್ ನಡೆಸುತ್ತಿದ್ದ ಗ್ಯಾಸ್ ಏಜೆನ್ಸಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಒಟ್ಟು ಶೇ.20ರಷ್ಟು ಸಿಲಿಂಡರ್ ಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚನೆಗಳಂತೆ ಆಸ್ಪತ್ರೆ, ಶಾಲೆ ,ಶಿಕ್ಷಣ ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ ಗಳ ಕ್ಯಾಂಟಿನ ಗಳಿಗೆ, ಪ್ರಮುಖ ದೇವಸ್ಥಾನಗಳಲ್ಲಿ ಪ್ರಸಾದ ವಿನಿಯೋಗ ಮಾಡಲು ಮತ್ತು ಸರ್ಕಾರಿ ಕಚೇರಿ, ವೃದ್ದಾಶ್ರಮ, ಪ್ರಮುಖ ಖಾಸಗಿ ವಲಯದ ಕಚೇಗಳಿಗೆ ಆದ್ಯತೆ ಮೇರೆಗೆ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ವಿತರಿಸಲು ಅಹಾರ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
