ಬೆಂಗಳೂರು: 40 ವರ್ಷದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಗ್ರಾಹಕರೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಕೇಳಿ ಬಂದಿದ್ದು ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಮಿ ಕೆ.ಆರ್. ರವಿ ಶೆಟ್ಟಿ ಎನ್ನುವವರು ಬ್ಯಾಂಕ್‌ಗೆ ಭೇಟಿ ನೀಡಿ ಉದ್ಯೋಗಿಯನ್ನು ಲೈಂಗಿಕವಾಗಿ ಕಿರುಕುಳ ನೀಡಲು ಮುಂದಾದ ಆರೋಪಿಯಾಗಿದ್ದಾರೆ.
ಮಹಿಳಾ ಉದ್ಯೋಗಿ ನೀಡಿರುವ ದೂರಿನ ಅನ್ವಯ ಶೆಟ್ಟಿ ಅವರು ಮಾರ್ಚ್ 10 ರಂದು ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳ ಬಗ್ಗೆ ವಿಚಾರಿಸಲು ಶಾಖೆಗೆ ಭೇಟಿ ನೀಡಿದ್ದರು. ಸಂಭಾಷಣೆಯ ಸಮಯದಲ್ಲಿ, ಬ್ಯಾಂಕಿಂಗ್ ಉದ್ದೇಶಗಳಿಗಾಗಿ ತನ್ನ ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡುವಂತೆ ಕೇಳಿಕೊಂಡಿದ್ದರು, ಆದರೆ ಉದ್ದೇಶಗಳ ಅರಿವಿಲ್ಲದೆ ಅವರಿಗೆ ನಾನು ನನ್ನ ಸಂಖ್ಯೆಯಿಂದ ಮಿಸ್ಸ್ಡ್ ಕಾಲ್ ನೀಡಿದ್ದೆ. ಅದೇ ದಿನ ರಾತ್ರಿ 8 ಗಂಟೆಗೆ ಅವರು ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನಲೆಯಲ್ಲಿ ಮಾರ್ಚ್ 11 ರಂದು ಶಾಖೆಯ ಮುಖ್ಯ ವ್ಯವಸ್ಥಾಪಕರಿಗೆ ದೂರು ನೀಡಿದೆ. ಆಗ ಅವರನ್ನು ಸಂಪರ್ಕಿಸಿದಾಗ ಬ್ಯಾಂಕ್‌ಗೆ ಭೇಟಿ ನೀಡಿ ಕ್ಷಮೆಯಾಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಅದೇ ದಿನ ಸಂಜೆ ವ್ಯವಸ್ಥಾಪಕರಿಗೆ ನಿಂದಿಸಿ ಸಂದೇಶಗಳನ್ನು ಕಳುಹಿಸಿದ್ದಾರೆ. ಈ ಘಟನೆಯ ನಂತರ ಪೊಲೀಸರನ್ನು ಸಂಪರ್ಕಿಸಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 75 (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಉದ್ಯಮಿ ಕೆ.ಆರ್. ರವಿ ಶೆಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ.
