News

ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

Share It

ಮಂಗಳೂರು: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪಗಳನ್ನು ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುದೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

ಮೂಡುಬಿದಿರೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತ ಆರೋಪಿಯ ಪತ್ನಿಯು ಠಾಣೆಯ ಇನ್ ಸ್ಪೆಕ್ಟರ್ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸಿ ಪ್ರಾಥಮಿಕ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಉತ್ತರ ಉಪವಿಭಾಗ (ಪಣಂಬೂರು)ದ ಎಸಿಪಿಗೆ ಸೂಚಿಸಿದ್ದರು. ಎಸಿಪಿ ಅವರು ಪ್ರಾಥಮಿಕ ತನಿಖೆಯನ್ನು ನಡೆಸಿ ಪೊಲೀಸ್‌ ಆಯುಕ್ತರಿಗೆ ವರದಿ ನೀಡಿರುವ ಹಿನ್ನಲೆಯಲ್ಲಿ ಈ ಆದೇಶ ಹೊರಬಿದ್ದಿದೆ.

ಮಕ್ಕಳನ್ನೂ ಬಿಡದ ಕಿರಾತಕ:

ಈ ಪ್ರಕರಣದಲ್ಲಿ ಇನ್ನೊಂದು ಕರಾಳವಾದ ಅಂಶವಾಗಿ ಇನ್ಸ್‌ಪೆಕ್ಟರ್ ತಾನು ಲೈಂಗಿಕವಾಗಿ ಬಳಸಿಕೊಂಡ ಮಹಿಳೆಯೊಬ್ಬರ ಅಪ್ರಾಪ್ತ ಮಗಳ ಮೇಲೂ ಕೆಟ್ಟದೃಷ್ಟಿ. ಬೀರಿದ್ದು ನಿನ್ನೆ ಬೆಳಕಿಗೆ ಬಂದಿತ್ತು. ತೀಟೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಕಣ್ಣುಹಾಕಿದ್ದಲ್ಲದೆ, ಆಕೆ ಓದುತ್ತಿರುವ ಕಾಲೇಜಿಗೆ ಹೋಗುತ್ತೇನೆ ಎಂದು ಫೋನ್‌ನಲ್ಲಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದು ಗೊತ್ತಾಗಿತ್ತು. ಈ ಆರೋಪಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಆಗಿದ್ದು, ಇದೂ ಕೂಡ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.


Share It

You cannot copy content of this page